
ಉದಯವಾಹಿನಿ ಗಾಂಧಿನಗರ ವಿಧಾನಸಭಾ ಕ್ಷೇತ್ರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರು ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಶ್ರೀನಿವಾಸಮೂರ್ತಿರವರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.ಇದೇ ಸಂದರ್ಭದಲ್ಲಿ ಶ್ರೀನಿವಾಸಮೂರ್ತಿರವರು ಮಾತನಾಡಿ ಸಮಾಜ ಸೇವೆ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ.ರಾಜಕೀಯ ಕ್ಷೇತ್ರದಲ್ಲಿ ನನ್ನ ಗುರುಗಳು,ಮಾರ್ಗದರ್ಶಕರಾದ ಸಚಿವರಾದ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಕಾಟನ್ ಪೇಟೆ ಬ್ಲಾಕ್ ನಲ್ಲಿ ಸಂಘಟನೆ ಮಾಡುತ್ತಿದ್ದೇನೆ.ಕಾಶಿ ವಿಶ್ವನಾಥ ದೇವಾಲಯದ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ.ಕಾಂಗ್ರೆಸ್ ಪಕ್ಷದ ಸಂಘಟನೆ ನನ್ನ ಉದ್ದೇಶ, ಧ್ವನಿ ಇಲ್ಲದ,ನೊಂದವರ ಪರ ಹೋರಾಟ ನನ್ನ ಗುರಿ. ಕಾಂಗ್ರೆಸ್ ಪಕ್ಷ 5ಗ್ಯಾರಂಟಿ ಯೋಜನೆಗಳನ್ನು ಕಾಟನ್ ಪೇಟೆ ಪ್ರದೇಶದಲ್ಲಿ ಪ್ರತಿ ಮನೆಗಳಿಗೆ ತೆರಳಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.
