ಉದಯವಾಹಿನಿ, ಲಕ್ನೋ: ಭಾರತದ ಹಲವೆಡೆ ವಿಚ್ಛೇದನವನ್ನು ಇಂದಿಗೂ ಕಳಂಕ ಎಂಬಂತೆ ನೋಡಲಾಗುತ್ತದೆ. ಇದರ ನಡುವೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಮಗಳನ್ನು ತಂದೆಯೊಬ್ಬ ಬ್ಯಾಂಡ್ ಜೊತೆ ಮೆರವಣಿಗೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಕೌಟುಂಬಿಕ ಸಮಸ್ಯೆಯಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಣಿತ ಎಂಬ ಮಹಿಳೆಗೆ ಕೋರ್ಟ್ ವಿಚ್ಛೇದನ ನೀಡಿತ್ತು. ನಿವೃತ್ತ ನ್ಯಾಯಾಧೀಶರಾದ ಅವರ ತಂದೆ ನ್ಯಾಯಾಲಯದ ಸಂಕೀರ್ಣದ ಹೊರಗೆ ಡ್ರಮ್ ನುಡಿಸಿ, ಸಿಹಿ ಹಂಚಿ ಈ ಕ್ಷಣವನ್ನು ಸಂಭ್ರಮಿಸಿದ್ದಾರೆ. ಈ ವೇಳೆ ಸಂಬಂಧಿಕರು ಡ್ರಮ್ ಬೀಟ್‌ಗಳಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
