ಉದಯವಾಹಿನಿ, ಟೆಹ್ರಾನ್: ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ ಎಂದು ಐಆರ್‌ಜಿಸಿ ಅಧಿಕೃತವಾಗಿ ಹೇಳಿಕೊಂಡಿದೆ. ಆದ್ರೆ ಖಾದೇಮಿ ಸಾವನ್ನಪ್ಪಿದ್ದ ಸ್ಥಳದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.
ಟೆಹ್ರಾನ್: ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ ಎಂದು ಐಆರ್‌ಜಿಸಿ ಅಧಿಕೃತವಾಗಿ ಹೇಳಿಕೊಂಡಿದೆ. ಆದ್ರೆ ಖಾದೇಮಿ ಸಾವನ್ನಪ್ಪಿದ್ದ ಸ್ಥಳದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ ಗುಪ್ತಚರ ಸಂಸ್ಥೆಯ ಮುಖ್ಯಸ್ಥರಾಗಿದ್ದ ಮೇಜರ್ ಜನರಲ್ ಮಜೀದ್ ಖಾದೇಮಿ ಇಂದು ಮುಂಜಾನೆ ಅಮೆರಿಕ-ಇದ್ರೇಲ್‌ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಆರ್‌ಜಿಸಿ ತನ್ನ ಅಧಿಕೃತ ಟೆಲಿಗ್ರಾಮ್‌ ಚಾನೆಲ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಕಳೆದ ಜೂನ್‌ ತಿಂಗಳಲ್ಲಿ ನಡೆದಿದ್ದ 12 ದಿನಗಳ ಯುದ್ಧದ ವೇಳೆ ಇಸ್ರೇಲ್, ಜನರಲ್ ಮೊಹಮ್ಮದ್ ಕಜೆಮಿ‌ ಅವರನ್ನ ಹತ್ಯೆ ಮಾಡಿತ್ತು. ಆ ಬಳಿಕ ಖಾದೇಮಿ ಗುಪ್ತಚರ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದರು

Leave a Reply

Your email address will not be published. Required fields are marked *

error: Content is protected !!