ಉದಯವಾಹಿನಿ, ತುಮಕೂರು: ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ.
ಕಾಂತಮ್ಮ (43), ಸಾವನ್ನಪ್ಪಿದ ನ್ಯಾಯಾಧೀಶೆ. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕಾಂತಮ್ಮ ಸಾವನಪ್ಪಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದ ನ್ಯಾ.ಕಾಂತಮ್ಮ ಇಂದು ವಸತಿ ಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!