ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಇದರ ನಡುವೆ ಏ.21ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಹವಾಮಾನ ಇಲಾಖೆ ಪ್ರಕಾರ, ಏ.20ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಏ.1ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ಇದರ ನಡುವೆ ರಾಜ್ಯದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಸಾಮಾನ್ಯಕ್ಕಿಂತ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ 36 ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದ್ದು, ನೆತ್ತಿ ಸುಡುವಂತಾಗಿದೆ.
ಏಪ್ರಿಲ್‌ನಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಮುಂದಿನ ತಿಂಗಳು ಇನ್ನಷ್ಟು ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

error: Content is protected !!