ಉದಯವಾಹಿನಿ, ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್‌ನಿಂದ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಕ್ವೆಶ್ಮ್ ಮತ್ತು ಲಾರಕ್ ದ್ವೀಪಗಳ ನಡುವಿನ ಸಮುದ್ರದಲ್ಲಿ ಈ ದಾಳಿ ನಡೆದಿದೆ. ದಾಳಿ ಬಳಿಕ ತೈಲ ಟ್ಯಾಂಕರ್‌ಗಳು ಅಲ್ಲಿಂದ ವಾಪಸ್ ಆಗಿವೆ ಎಂದು ವರದಿಯಾಗಿದೆ.ಜಲಸಂಧಿಯಲ್ಲಿ ಹಡಗುಗಳು ಬರುತ್ತಿದ್ದಂತೆ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ (IRGC) ಎರಡು ಗನ್‌ಬೋಟ್‌ಗಳು ಅವನ್ನು ಸಮೀಪಿಸಿವೆ. ಈ ವೇಳೆ ಯಾವುದೇ ರೇಡಿಯೋ ಸಂದೇಶ ನೀಡದೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಟ್ಯಾಂಕರ್‌ನ ಕ್ಯಾಪ್ಟನ್ ವರದಿ ಮಾಡಿದ್ದಾರೆ.
ಒಮನ್‌ನ ಈಶಾನ್ಯಕ್ಕೆ 37 ಕಿಲೋಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ. ಟ್ಯಾಂಕರ್ ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಯುಕೆ ಕಡಲ ವ್ಯಾಪಾರ ಕಾರ್ಯಾಚರಣೆ ಕೇಂದ್ರ ಮಾಹಿತಿ ಹಂಚಿಕೊಂಡಿದೆ.
ಈ ಬೆಳವಣಿಗೆ ನಡುವೆ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿರುವ ವ್ಯಾಪಾರಿ ಹಡಗುಗಳು ಇರಾನಿನ ನೌಕಾಪಡೆಯಿಂದ ರೇಡಿಯೋ ಸಂದೇಶಗಳನ್ನು ಸ್ವೀಕರಿಸಿವೆ. ಈ ಸಂದೇಶದಲ್ಲಿ ಅಮೆರಿಕ ಸರ್ಕಾರವು ತನ್ನ ಬದ್ಧತೆಯನ್ನು ತೋರಿಸುವಲ್ಲಿ ವಿಫಲವಾಗಿದೆ. ಇದೇ ಕಾರಣಕ್ಕೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ಮುಚ್ಚಿದ್ದೇವೆ ಎಂದು ನಾವು ಘೋಷಿಸುತ್ತೇವೆ. ಯಾವುದೇ ರಾಷ್ಟ್ರದ ಹಡಗು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿಸಲಾಗುವುದಿಲ್ಲ ಎಂದು ಎಚ್ಚರಿಸಲಾಗಿದೆ.
