ಉದಯವಾಹಿನಿ, ಚಾಮರಾಜನಗರ: ಕೊರೊನಾ ವೇಳೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 21 ಮಂದಿಗೆ ಸರ್ಕಾರಿ ಕೆಲಸ ಘೋಷಣೆ ಮಾಡಿದ್ದು, ಮಂಗಳವಾರ (ಏ.21) ಸಿಎಂ ಸಿದ್ದರಾಮಯ್ಯ ಅವರು ನೇಮಕಾತಿ ಆದೇಶ ಪತ್ರ ವಿತರಿಸಲಿದ್ದಾರೆ. ಹೌದು. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ಅವಧಿಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು.
ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಅಂದಿನಿಂದಲೂ ಹೋರಾಟ ಮಾಡಲಾಗುತ್ತಿತ್ತು. ಇದೀಗ ಸಂತ್ರಸ್ತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಏ.21 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 21 ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಕೆಲಸದ ಆದೇಶ ಪತ್ರ ವಿತರಿಸಲಿದ್ದಾರೆ.ಸರ್ಕಾರಿ ಕೆಲಸ ಸಿಗುವ ಸಂತಸದಲ್ಲಿರುವ ದೊಡ್ಡಯ್ಯ ಕುಟುಂಬ ʻ ಗಂಡನನ್ನು ಕಳೆದುಕೊಂಡು ಜೀವನ ನಡೆಸಲು ಪರದಾಡಿದ್ದು ಮಗನನ್ನು ಓದಿಸಲು ಕಷ್ಟಪಟ್ಟ ಬಗ್ಗೆ ನೆನೆದು ಕಣ್ಣೀರು ಸುರಿಸಿದ್ದಾರೆ.
