ಉದಯವಾಹಿನಿ, ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿ ಘಟನೆ ನಡೆದಿದೆ. ಬೆಳ್ತಂಗಡಿಯ ಕಡಿರುದ್ಯಾವರ ನಿವಾಸಿ ಸುಮಂತ್ (28) ಮತ್ತು ಗರ್ಡಾಡಿ ನಿವಾಸಿ ನವನೀತ್ (26) ಬಂಧಿತ ಆರೋಪಿಗಳು. ಏಪ್ರಿಲ್ 16 ರಂದು ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿ ಪೋಷಕರಿಗೆ ಸನ್ನಿವೇಶ ವಿವರಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ (POCSO) ಪ್ರಕರಣದ ಅಡಿ ಎಫ್‌ಐಆರ್ ದಾಖಲಿಸಿದ ಪೊಲೀಸರು, ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ತನಿಖೆ ಪ್ರಗತಿಯಲ್ಲಿದೆ.
