ಉದಯವಾಹಿನಿ, ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ವಿರುಧುನಗರ ಜಿಲ್ಲೆಯ ಕಟ್ಟನಾರ್‌ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದೆ.ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪಟಾಕಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ಸಂಭವಿಸಿದ ಘರ್ಷಣೆಯಿಂದ ಈ ಭೀಕರ ಸ್ಫೋಟ ಸಂಭವಿಸರಬಹುದು ಎಂದು ಶಂಕಿಸಲಾಗಿದೆ.

 

Leave a Reply

Your email address will not be published. Required fields are marked *

error: Content is protected !!