ಉದಯವಾಹಿನಿ, ಕೈವ್ : ಉಕ್ರೇನ್ ರಾಜಧಾನಿ ಕೈವ್‌ನಲ್ಲಿನ ಸೂಪರ್ ಮಾರ್ಕೆಟ್​​ನಲ್ಲಿ ಇಂದು ರಾತ್ರಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ 5 ಜನರನ್ನು ಕೊಂದಿದ್ದ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದರು. ಇದಾದ ನಂತರ ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ.

Leave a Reply

Your email address will not be published. Required fields are marked *

error: Content is protected !!