ಉದಯವಾಹಿನಿ, ಬಾಲಿವುಡ್ ಸ್ಟಾರ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಫ್ಯಾನ್ಸ್ ಜೊತೆ ಮತ್ತೊಂದು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದೇವೆಂದು ದಂಪತಿ ಘೋಷಿಸಿಕೊಂಡಿದ್ದಾರೆ.
ದೀಪಿಕಾ-ರಣವೀರ್ ದಂಪತಿ ತಮ್ಮ ಮಗಳು ದುವಾ ಪ್ರೆಗ್ನೆನ್ಸಿ ಟೆಸ್ಟ್ ಕಿಟ್ ಹಿಡಿದಿರುವ ಫೋಟೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ತಾವು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದೇವೆಂದು ಹೇಳಿಕೊಂಡಿದ್ದಾರೆ. ಸ್ಟಾರ್ ಜೋಡಿಗೆ ಅಭಿಮಾನಿಗಳು ಮತ್ತು ಹಿತೈಷಿಗಳು ವಿಶ್ ಮಾಡಿ ಕಾಮೆಂಟ್ ಹಾಕುತ್ತಿದ್ದಾರೆ.
ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದ ದೀಪಿಕಾ ಮತ್ತು ರಣವೀರ್ 2018 ರಲ್ಲಿ ಇಟಲಿಯಲ್ಲಿ ವಿವಾಹವಾದರು. 2024ರ ಸೆಪ್ಟೆಂಬರ್ 8 ರಂದು ದೀಪಿಕಾ ಮತ್ತು ರಣವೀರ್ ತಮ್ಮ ಮೊದಲ ಹೆಣ್ಣು ಮಗುವನ್ನು ಸ್ವಾಗತಿಸಿದ್ದರು. ಬಾಲಿವುಡ್ ದಂಪತಿ ತಮ್ಮ ಮಗಳಿಗೆ ದುವಾ ಎಂದು ಮುದ್ದಾದ ಹೆಸರಿಟ್ಟರು.
ರಣವೀರ್ ಸಿಂಗ್ ಪ್ರಸ್ತುತ ಧುರಂಧರ್ 2 ರ ಯಶಸ್ಸನ್ನು ಆನಂದಿಸುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಿ ತಿಂಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಗಲ್ಲಾಪೆಟ್ಟಿಗೆಯಲ್ಲೂ ದಾಖಲೆಯನ್ನು ಬರೆದಿದೆ. ಈ ಸಂತೋಷದ ನಡುವೆ ದಂಪತಿ ಮತ್ತೊಂದು ಸಿಹಿ ಸುದ್ದಿಯನ್ನು ಫ್ಯಾನ್ಸ್ ಜೊತೆ ಶೇರ್ ಮಾಡಿಕೊಂಡಿದ್ದಾರೆ
