ಉದಯವಾಹಿನಿ, ಬೆಂಗಳೂರು: ನನಗೆ ಕಾಂಗ್ರೆಸ್ ಏನು ಕಡಿಮೆ ಮಾಡಿಲ್ಲ. ನಾನು ಯಾಕೆ ಜೆಡಿಎಸ್‌ಗೆ ಹೋಗಲಿ. ನಾನು ಜೆಡಿಎಸ್‌ಗೆ ಹೋಗುತ್ತೇನೆ ಅನ್ನೋದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ.
ಜಮೀರ್ ಜೆಡಿಎಸ್‌ಗೆ ಹೋಗುತ್ತಾರೆ, ಕುಮಾರಸ್ವಾಮಿ ಜೊತೆ ರಹಸ್ಯ ಮಾತುಕತೆ ಮಾಡಿದ್ದಾರೆ ಎಂಬ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಥೂ..ಥೂ…ನಾನು ಯಾಕೆ ಜೆಡಿಎಸ್‌ಗೆ ಹೋಗಲಿ. ಇದೆಲ್ಲ ಊಹಾಪೋಹ ಸುದ್ದಿ ಎಂದರು. ನಾನು ಜೆಡಿಎಸ್ ಬಿಟ್ಟು ಬಂದು ಮತ್ತೆ ಯಾಕೆ ಹೋಗಲಿ? ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿಲ್ಲ. 2017 ರಲ್ಲಿ ನಾನು ಕಾಂಗ್ರೆಸ್‌ಗೆ ಬಂದೆ. 2018ರಲ್ಲಿ ಸಮ್ಮಿಶ್ರ ಸರ್ಕಾರ ಕುಮಾರಸ್ವಾಮಿ ಸಿಎಂ ಇದ್ದರು. ನಿರೀಕ್ಷೆ ಕೂಡಾ ಮಾಡಿರಲಿಲ್ಲ, ಯಾರನ್ನು ಕೇಳಿರಲಿಲ್ಲ ಆಗಲೇ ಮಂತ್ರಿ ಮಾಡಿದ್ರು. 5 ಖಾತೆಗಳನ್ನ ಕೊಟ್ಟಿದ್ದರು. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ವಕ್ಫ್ ಖಾತೆ ಮಾತ್ರ ಕೊಟ್ಟಿದ್ದರು. 5 ಖಾತೆ ಕೊಟ್ಟಿದ್ದರು ಕಾಂಗ್ರೆಸ್ ಅವರು. ಈಗ 2023ರಲ್ಲಿ 4 ಖಾತೆ ಕೊಟ್ಟಿದ್ದಾರೆ. ಕಾಂಗ್ರೆಸ್ ನನಗೇನು ಕಡಿಮೆ ಮಾಡಿದೆ ಜೆಡಿಎಸ್‌ಗೆ ಹೋಗೋಕೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!