ಉದಯವಾಹಿನಿ, ಬೆಂಗಳೂರು: ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ಎಂಬ ಯುವಕ ಕಣ್ಮರೆಯಾಗಿದ್ದಾನೆ. ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್ ತನ್ನ ಗೆಳತಿಯೊಂದಿಗೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ. ಯುವಕ ಮತ್ತು ಯುವತಿ ಒಟ್ಟಿಗೆ ವಾಸವಾಗಿದ್ದು, ಕೆಲ ದಿನಗಳ ಹಿಂದೆ ಯುವಕ ಚಿನ್ಮಯ್ ಮೊಬೈಲ್‌ಗೆ ಆತನದ್ದೇ ಖಾಸಗಿ ಫೋಟೋಗಳು ಬಂದಿತ್ತು. ಸೈಬರ್ ವಂಚಕರು, ಇನ್ನೂ ಹಲವು ಖಾಸಗಿ ಫೋಟೋಗಳಿವೆ. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಬಾರದು ಅಂದರೆ ನಾವು ಹೇಳಿದಷ್ಟು ಹಣ ಕೊಡಬೇಕು ಎಂದು ಬೆದರಿಸಿದ್ದರು.

ಇದರಿಂದ ನೊಂದಿದ್ದ ಯುವಕ, ಏ.15ರಂದು ಕಸ ಹಾಕಲು ಹೋದವನು ಮನೆಯಿಂದ ನಾಪತ್ತೆಯಾಗಿದ್ದಾನೆ. ಯಾರಾದರೂ ಕಿಡ್ನ್ಯಾಪ್ ಮಾಡಿದ್ರ? ಅಥವಾ ತಾನೇ ಎಲ್ಲಾದರೂ ಹೋಗಿದ್ದಾನಾ ಎಂಬುದರ ಬಗ್ಗೆ ಹುಳಿಮಾವು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!