ಉದಯವಾಹಿನಿ, ಬೆಂಗಳೂರು: ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ ಮಾಧ್ಯಮದಲ್ಲಿ ಬರ್ತಿರುವ ವಿಚಾರ ಅದು. ಅವರು ಈಗಾಗಲೇ ಈ ವಿಚಾರಕ್ಕೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಥಾನಮಾನ ಕೊಟ್ಟಿದೆ. ಅವರ ಬಗ್ಗೆ ಚರ್ಚೆ ಬೇಡ, ನಮ್ಮ ಪಾರ್ಟಿ ಕಟ್ಟೋಕೆ ಕಾರ್ಯಕರ್ತರಿದ್ದಾರೆ. ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಸಿದ್ಧರಿದ್ದಾರೆ. ಪಕ್ಷ ಯಾರನ್ನ ನೆಚ್ಚಿಕೊಂಡಿಲ್ಲ ಅಂತ ಜಮೀರ್‌ಗೆ ತಿರುಗೇಟು ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಮಾಡಿದ್ದಾರೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಮಾಟ ಮಂತ್ರದ ಬಗ್ಗೆ ಅಷ್ಟು ಅರಿವಿಲ್ಲ. ನಾವು ದೈನಂದಿನ ಜೀವನದಲ್ಲಿ ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ನಮ್ಮಿಂದ ನಾಲ್ಕು ಜನರಿಗೆ ಒಳ್ಳೆಯದು ಆಗಬೇಕು ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತರು ಜೆಡಿಎಸ್ ಕಡೆಗೆ ಮುಖ ಮಾಡುವ ವಿಚಾರವಾಗಿ ಮಾತನಾಡಿ, ಸಿಎಂ ಅವರು ಯಾವಾಗಲೂ ಅಹಿಂದ ರಾಜಕಾರಣಿ ಅಂತ ಹೇಳ್ತಾರೆ. ಅಹಿಂದದಲ್ಲಿ ಅ ಮತ್ತು ದ ಅನ್ನೋದು ಉರುಳಿ ಹೋಗಿದೆ. ರಾಜಣ್ಣ, ನಾಗೇಂದ್ರ ಅವರನ್ನ ಸಚಿವ ಸಂಪುಟದಿಂದ ಕೈಬಿಟ್ಟಾಗಿದೆ. ಜಬ್ಬಾರ್, ನಜೀರ್ ತಲೆದಂಡ ಆಗಿದೆ. ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿದ್ದಾರೆ. ಆ ಕ್ಷೇತ್ರದಲ್ಲಿ ಮುಸ್ಲಿಂ ಬಾಂದವರಿಗೆ ಟಿಕೆಟ್ ಕೊಡಬೇಕಿತ್ತು. ಅಲ್ಲಿ ಜಬ್ಬಾರ್, ನಜೀರ್ ಕೈ ಬಿಟ್ಟಿದ್ದಾರೆ. ಅಹಿಂದದಲ್ಲಿ ಅ-ಅಲ್ಪಸಂಖ್ಯಾತ, ದ-ದಲಿತ ಹೋಗಿದೆ. ಉಳಿದಿರೋದು ಹಿಂದುಳಿದ ಅನ್ನೋದು, ಅದು ಯಾವಾಗ ಹೋಗುತ್ತದೆ ಗೊತ್ತಿಲ್ಲ. ಸಂಪೂರ್ಣ ಅಹಿಂದ ಛಿದ್ರಗೊಳ್ಳುತ್ತದೆಯೋ ಗೊತ್ತಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!