ಉದಯವಾಹಿನಿ, ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.ವಾಷಿಂಗ್ಟನ್ ಮೂಲದ ಮಹಿಳೆ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್ ಕುಮಾರ್, ಹೋಂಸ್ಟೇ ಮಾಲೀಕ ವಿಶಾಲ್ ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಏನಿದು ಪ್ರಕರಣ?: ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನ: ಇನ್ನೂ ವಿಷಯ ತಿಳಿದ ಹೋಮ್‌ಸ್ಟೇ ಮಾಲೀಕ ವಿಶಾಲ್ ಪ್ರಕರಣವನ್ನೇ ಮುಚ್ಚಿಹಾಕಲು ಯತ್ನಿಸಿರೋದು ದೂರಿನಿಂದ ಗೊತ್ತಾಗಿದೆ. ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದಾನೆ. ಹೋಂ ಸ್ಟೇ ವೈಫೈ ಕೂಡ ಕಟ್ ಮಾಡಿದ್ದಾನೆ. 3 ದಿನದ ಬಳಿಕ ಸಂತ್ರಸ್ತೆ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದಾರೆ. ನಂತರ ಮೈಸೂರಿಗೆ ಬಂದ ವಿದೇಶಿ ಮಹಿಳೆ ಅಮೆರಿಕದ ರಾಯಭಾರ ಕಚೇರಿಯನ್ನ ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ.
