ಉದಯವಾಹಿನಿ, ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್ ರಮೇಶ್ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್‌ ಅವರು ಸಹ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಕಾಡಾನೆಗಳ ಹೆಜ್ಜೆ ಗುರುತು ನೋಡಿಕೊಂಡು, ಚಲನವಲನ ಗಮನಿಸುತ್ತ ರಮೇಶ್, ವಿಶ್ವ ಹಾಗೂ ಜೀವನ್ ತೆರಳುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಮೂವರು ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!