ಉದಯವಾಹಿನಿ, ಬೆಂಗಳೂರು: ಬೈಕ್‌ ಸವಾರರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಯರಿಗೆ ಬೈಕ್‌ ಸವಾರರಿಬ್ಬರು ಅಂಗಾಂಗ ಮುಟ್ಟಿ ವಿಕೃತಿ ಮೆರೆದ ಪ್ರಕರಣ ಯಲಹಂಕದಲ್ಲಿ ನಡೆದಿದೆ. ಇಬ್ಬರನ್ನೂ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿಗಳನ್ನು ಪಾವಗಡ ಮೂಲದ ಹರೀಶ್ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯಲ್ಲಿ ಫೇಲ್ ಆಗಿದ್ದ ಇಬ್ಬರು ಬೆಂಗಳೂರಿಗೆ ಬಂದು ಡಿಲವರಿ ಬಾಯ್‌ ಕೆಲಸ ಮಾಡಿಕೊಂಡಿದ್ದರು. ಇದೇ ತಿಂಗಳ 22 ರಂದು ಯಲಹಂಕದಿಂದ ಬಾಗಲೂರಿಗೆ ತೆರಳುವ ಮುಖ್ಯರಸ್ತೆಯಲ್ಲಿ ಬೈಕ್ ನಲ್ಲಿ ತೆರಳುವಾಗ ಯುವತಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಆರೋಪಿಗಳ ಕೃತ್ಯ ಹಿಂಬದಿಯಿಂದ ಬರ್ತಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರಯಾಗಿತ್ತು. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಖಂಡಿಸಲಾಗಿತ್ತು.‌ ತಕ್ಷಣ ಅಲರ್ಟ್ ಆಗಿ ಸುಮೊಟೊ ಕೇಸ್ ದಾಖಲಿಸಿಕೊಂಡ ಯಲಹಂಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!