ಉದಯವಾಹಿನಿ, ಚಾಮರಾಜನಗರ: ಬೇಸಿಗೆ ಹಿನ್ನೆಲೆ ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗೆ ಎದುರಾಗಬಹುದಾದ ಕುಡಿವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಈ ಮಧ್ಯೆ ಮನಕಲುಕುವ ಘಟನೆಯೊಂದು ನಡೆದುಹೋಗಿದೆ. ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ಮೂರು ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಉಡುತೊರೆಹಳ್ಳದ ಜಲಾಶಯದ ಬಳಿ ನಡೆದಿದೆ.
ಬಿಸಿಲಿನ ಬೇಗೆ ತಣಿಸಿಕೊಳ್ಳಲು ಉಡುತೊರೆಹಳ್ಳ ಜಲಾಶಯಕ್ಕೆ ನೀರು ಕುಡಿಯಲು ಬಂದಿದ್ದ ಕಾಡಾನೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು. ಅರಣ್ಯ ಸಿಬ್ಬಂದಿ ಆನೆಯನ್ನ ರಕ್ಷಣೆ ಮಾಡಿ ಹೊರತಂದಿದ್ದರು. ಆದರೂ ನಿತ್ರಾಣಗೊಂಡ ಸ್ಥಿತಿಯಲ್ಲಿದ್ದ ಆನೆಗೆ ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಆನೆ ಸಾವನ್ನಪ್ಪಿದೆ.

Leave a Reply

Your email address will not be published. Required fields are marked *

error: Content is protected !!