ಉದಯವಾಹಿನಿ, ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗುತ್ತಿದ್ದಾರೆ. ಸಂಜೆ 5 ಗಂಟೆಯವರೆಗಿನ ಅಂಕಿಅಂಶಗಳ ಪ್ರಕಾರ, ತಮಿಳುನಾಡಿನಲ್ಲಿ ಸುಮಾರು 82.24% ಮತದಾನ ದಾಖಲಾಗಿದೆ.ಪಶ್ಚಿಮ ಬಂಗಾಳದ ಮೊದಲ ಹಂತದ ಚುನಾವಣೆಯಲ್ಲಿ ಮತದಾನದ ಪ್ರಮಾಣ ಇನ್ನೂ ಹೆಚ್ಚಿದ್ದು, ಸುಮಾರು 89.93% ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ತಿಳಿಸಿವೆ.ತಮಿಳುನಾಡಿನಲ್ಲಿ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದರೆ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 152 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಉಳಿದ 142 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನ ವೀರಪಾಂಡಿಯಲ್ಲಿ 90.76% ಮತದಾನ ನಡೆದಿದೆ. ಪಶ್ಚಿಮ ಬಂಗಾಳದ ರಘುನಾಥ್ ಗಂಜ್ 95.64%, ಸಂಸೇರ್ ಗಂಜ್- 95.34% ಅತಿ ಹೆಚ್ಚಿನ ಮತದಾನವಾಗಿದೆ.
ತಮಿಳುನಾಡಿನ ಕೆಲವು ಕಡೆಗಳಲ್ಲಿ ಇವಿಎಂ (EVM) ದೋಷದಿಂದ ಮತದಾನ ವಿಳಂಬವಾಗಿದ್ದು ಮತದಾನದ ಅವಧಿಯನ್ನು ವಿಸ್ತರಿಸುವಂತೆ ನಟ ವಿಜಯ್ ಅವರ ಪಕ್ಷ ಮನವಿ ಮಾಡಿದೆ.
