ಉದಯವಾಹಿನಿ, ಬೆಂಗಳೂರು: ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗುವ ಮೊದಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK ಅವರು ದೆಹಲಿ ಅಂಗಳದಲ್ಲಿ ತಮ್ಮ ಪವರ್ ಕ್ಲೈಮ್ ಆರಂಭಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಹೌದು. ದಾವಣಗೆರೆ ಉಪ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ನಾನಾ ಬೆಳವಣಿಗೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಡಿಕೆಶಿ ದೆಹಲಿಯಲ್ಲಿ ಗಾಂಧಿ ಕುಟುಂಬದ ನಾಯಕರನ್ನು ಭೇಟಿಯಾಗಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೀತಾರಾ? ಡಿಕೆಶಿಗೆ ಕುರ್ಚಿ ಬಿಟ್ಟು ಕೊಡ್ತಾರಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ. ಈ ಹಿಂದೆ ಎರೆಡೆರಡು ಬಾರಿ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿ ಸಿಎಂ-ಡಿಸಿಎಂ ಇಬ್ಬರೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಬ್ಬರು ಬಹಿರಂಗವಾಗಿ ಒಗ್ಗಟ್ಟು ಪ್ರದರ್ಶಿಸಿದರೂ ಇಬ್ಬರ ಪರ ಇರುವ ಬೆಂಬಲಿಗ ಶಾಸಕರು ಪ್ರತ್ಯೇಕ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ತಂದೆಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದರೆ ಡಿಕೆಶಿ ಬೆಂಬಲಿಗ ಶಾಸಕರು ಈ ಅವಧಿಯಲ್ಲೇ ಡಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!