ಉದಯವಾಹಿನಿ, ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು. ಸುಧಾಕರ್ ಅವರ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ವೆಂಟಲೇಷನಲ್ಲಿ ಬೇರೆ ಎಲ್ಲಾ ಆರ್ಗನ್ಸ್ ಸ್ಟೇಬಲ್ಲಾಗಿವೆ. ಮೆದಳು ಮಾತ್ರ ಪ್ರಜ್ಞೆ ಇಲ್ಲ. ನಾಳೆ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಅದಾದ ನಂತರ ಕಂಡಿಷನ್ ಎನು ಎಂದು ಗೊತ್ತಾಗಲಿದೆ ಎಂದರು. ಮಾಧ್ಯಮಗಳ ಹೆಚ್ಚಿನ ಪ್ರಶ್ನೆಗೆ ʻಐ ಎಮ್ ನಾಟ್ ಎ ಡಾಕ್ಟರ್ʼ ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ.
ಕೆಲ ದಿನಗಳ ಹಿಂದೆ ಸಚಿವ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರದ ದಿನಗಳಲ್ಲಿ ಅವರಿಗೆ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
