ಉದಯವಾಹಿನಿ,ಶಿಡ್ಲಘಟ್ಟ : ನಗರ ಹಾಗೂ ತಾಲ್ಲೂಕಿನ ಎಲ್ಲಾ ಅಂಗಡಿ ಹಾಗೂ  ವಾಣಿಜ್ಯ ಸಂಸ್ಥೆಗಳು ಕಡ್ಡಾಯವಾಗಿ ಪರವಾನಗಿ ಪಡೆಯಬೇಕೆಂದು ತಾಲ್ಲೂಕು ವೃತ್ತ ನಿರೀಕ್ಷಣಾಧಿಕಾರಿ ವಿಜಯಲಕ್ಷ್ಮಿ ತಿಳಿಸಿದ್ದಾರೆ. ಶಿಡ್ಲಘಟ್ಟ ನಗರ ಮತ್ತು ತಾಲೂಕಿನಾದ್ಯಂತ ಎಲ್ಲಾ ರೀತಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಈಗಾಗಲೇ ನೊಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ನಿರೀಕ್ಷಕರ ಕಛೇರಿ, ಶಿಡ್ಲಘಟ್ಟ, ಇಲ್ಲಿ  ಕಡ್ಡಾಯವಾಗಿ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಸ್ಥೆಗಳು ರಾಜ್ಯ ಸರ್ಕಾರದ ಇ ಕಾರ್ಮಿಕ ತಂತ್ರಾಂಶವಾದ https://www.ekarmika.karnataka.gov.in ekarmika/Static/Home.aspx ಆನ್‌ಲೈನ್‌ ಮೂಲಕ ಅವಶ್ಯಕವಾಗಿ 15 ದಿನಗಳ
ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನೊಂದಣಿ ಪತ್ರ ಪಡೆದುಕೊಳ್ಳಬಹುದಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!