ಉದಯವಾಹಿನಿ, ಟೆಹರಾನ್: ಇರಾನ್‌ನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಅವರು ದೇಶವನ್ನು ಮುನ್ನಡೆಸಲು ಸಂಪೂರ್ಣವಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ ಜನರಲ್‌ಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ‘ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಮೊಜ್ತಾಬಾ ಅವರು ಕೇವಲ ಕಂಪನಿಯ ಮಂಡಳಿಯ ನಿರ್ದೇಶಕರಂತೆ ಕೆಲಸ ಮಾಡುತ್ತಿದ್ದು, ಮಿಲಿಟರಿ ಜನರಲ್‌ಗಳೇ ಮಂಡಳಿಯ ಸದಸ್ಯರಂತೆ ದೇಶದ ಪ್ರತಿಯೊಂದು ಪ್ರಮುಖ ನಿರ್ಧಾರಗಳನ್ನು ಜಂಟಿಯಾಗಿ ಕೈಗೊಳ್ಳುತ್ತಿದ್ದಾರೆ ಎಂದು ಮಾಜಿ ಅಧ್ಯಕ್ಷ ಅಹ್ಮದಿನೆಜಾದ್ ಅವರ ನಿಕಟವರ್ತಿ ಅಬ್ದುಲ್ರೆಜಾ ದಾವರಿ ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಮುಜ್ತಾಬಾ ಫೆಬ್ರವರಿ 28 ರಂದು ನಡೆದ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ತಂದೆ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕಳೆದುಕೊಂಡ ನಂತರ ಮೊಜ್ತಾಬಾ ರಹಸ್ಯ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಭೀಕರ ದಾಳಿಯಲ್ಲಿ ಅವರ ಪತ್ನಿ ಮತ್ತು ಮಗ ಸಾವನ್ನಪ್ಪಿದ್ದು, ಮೊಜ್ತಾಬಾ ಅವರು ಗಂಭೀರವಾಗಿ ಗಾಯಗೊಂಡು ಬದುಕುಳಿದಿದ್ದಾರೆ. ಸದ್ಯ ಅವರು ವೈದ್ಯಕೀಯ ಸಿಬ್ಬಂದಿಯ ಕಟ್ಟುನಿಟ್ಟಿನ ಕಾವಲಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಸ್ರೇಲ್‌ನ ನಿರಂತರ ಟ್ರ್ಯಾಕಿಂಗ್ ಭೀತಿಯಿಂದಾಗಿ ಹಿರಿಯ ಮಿಲಿಟರಿ ಅಥವಾ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡುತ್ತಿಲ್ಲ. ಸ್ವತಃ ಹೃದಯ ಶಸ್ತ್ರಚಿಕಿತ್ಸಕರೂ ಆಗಿರುವ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಮೇಲ್ವಿಚಾರಣೆಯಲ್ಲಿ ಮುಜ್ತಾಬಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
