ಉದಯವಾಹಿನಿ, ಬೆಂಗಳೂರು: ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆ ಮಾಡಲಾಗಿದೆ. ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್‌) ಸಹಯೋಗದಲ್ಲಿ ಈ ಕಲಾಕೃತಿಯನ್ನು ಟರ್ಮಿನಲ್-2ರ ಮುಂಭಾಗದಲ್ಲಿ ಸ್ಥಾಪಿಸಲಾಗಿದೆ. ಸ್ಪೇನ್‌ನ ಖ್ಯಾತ ಕಲಾಕಾರ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಈ ಶಿಲ್ಪವು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.

ಭಾರತದಲ್ಲಿನ ಸ್ಪೇನ್ ರಾಯಭಾರಿ ಜುವಾನ್ ಆಂಟೋನಿಯೊ ಮಾರ್ಚ್ ಪೂಜೋಲ್ ಅವರು ಈ ಕಲಾಕೃತಿಯನ್ನು ಅಧಿಕೃತವಾಗಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಬಯೊಕಾನ್ ಗ್ರೂಪ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿ ಮರಾರ್ ಮತ್ತು ಕಲಾಕೃತಿಯ ರೂವಾರಿ ಜೌಮೆ ಪ್ಲೆನ್ಸಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!