ಉದಯವಾಹಿನಿ, ವಾಷಿಂಗ್ಟನ್: ನಡೆದ ವಾರ್ಷಿಕ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ವೇಳೆ ಸಂಭವಿಸಿದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಾ ಘಟನೆಯನ್ನು ತಮ್ಮದೇ ಶೈಲಿಯಲ್ಲಿ ವಿಶ್ಲೇಷಿಸಿದ್ದಾರೆ.ಅಧ್ಯಕ್ಷ ವೃತ್ತಿ ಇಷ್ಟೊಂದು ಅಪಾಯಕಾರಿ ಎಂದು ಯಾರೂ ನನಗೆ ಎಚ್ಚರಿಸಿರಲಿಲ್ಲ. ಒಂದು ವೇಳೆ ನನ್ನ ಮಿತ್ರ ವಿದೇಶಾಂಗ ಕಾರ್ಯದರ್ಶಿಯಾಗಿರುವ ಮಾರ್ಕೊ ರೂಬಿಯೋ ಮೊದಲೇ ಈ ಬಗ್ಗೆ ಮಾಹಿತಿ ನೀಡಿದ್ದರೆ, ಬಹುಶಃ ನಾನು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎರಡು ಬಾರಿ ಯೋಚಿಸುತ್ತಿದ್ದೆ” ಎಂದು ಟ್ರಂಪ್ ಹಾಸ್ಯ ಚಟಾಕಿ ಹಾರಿಸಿದರು.
ಅಮೆರಿಕದ ಇತಿಹಾಸವನ್ನು ಉಲ್ಲೇಖಿಸಿದ ಅವರು, ಅಂಕಿಅಂಶಗಳ ಪ್ರಕಾರ ಸುಮಾರು 8% ಅಧ್ಯಕ್ಷರ ಮೇಲೆ ಗುಂಡಿನ ದಾಳಿ ನಡೆದಿದೆ ಮತ್ತು 5.8% ಅಧ್ಯಕ್ಷರು ಹತ್ಯೆಗೀಡಾಗಿದ್ದಾರೆ. ಇದು ಜಗತ್ತಿನ ಅತ್ಯಂತ ಅಪಾಯಕಾರಿ ಉದ್ಯೋಗಗಳಲ್ಲಿ ಒಂದು ಎಂದು ಗಂಭೀರವಾಗಿಯೇ ನುಡಿದರು.

ಅಪಾಯಗಳ ನಡುವೆಯೂ ದೇಶ ಸೇವೆ ಕರ್ತವ್ಯದ ಬಗ್ಗೆ ಮಾತನಾಡಿದ ಟ್ರಂಪ್‌, ನಾನು ಇಲ್ಲಿ ನನ್ನ ಕೆಲಸ ಮಾಡಲು ಬಂದಿದ್ದೇನೆ. ಎಷ್ಟೇ ಅಪಾಯವಿದ್ದರೂ ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಅಮೆರಿಕದ ಜನರ ಸೇವೆ ಮಾಡುವುದರಲ್ಲಿ ನನಗೆ ಹೆಮ್ಮೆ ಇದೆ” ಎಂದು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಭೋಜನಕೂಟ ನಡೆಯುತ್ತಿದ್ದಾಗ ಶಂಕಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದನು. ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಕ್ಷಣವೇ ಟ್ರಂಪ್ ಮತ್ತು ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ದಾಳಿಕೋರನನ್ನು ಈಗಾಗಲೇ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!