ಉದಯವಾಹಿನಿ,ಗಾಝಾ : ಗಾಝಾದಾದ್ಯಂತ  ಇಸ್ರೇಲ್ ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಮಹಿಳೆ, ಮಗು ಸೇರಿದಂತ ಕನಿಷ್ಠ 7 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಅಧಿಕಾರಿಗಳು  ಹೇಳಿದ್ದಾರೆ.
ದಕ್ಷಿಣ ಗಾಝಾದಲ್ಲಿ ಪೊಲೀಸ್ ವಾಹನವನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದಾರೆ.
ಉತ್ತರ ಗಾಝಾದಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಮಹಿಳೆ ಮತ್ತು ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ. ಗಾಝಾದಲ್ಲಿ ಭಯೋತ್ಪಾದಕರ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಪ್ರತಿಕ್ರಿಯಿಸಿದೆ.

Leave a Reply

Your email address will not be published. Required fields are marked *

error: Content is protected !!