ಉದಯವಾಹಿನಿ,ಗಾಝಾ : ಬಾಲಿವುಡ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ 2022ರ ಡ್ರಗ್ಸ್ ಪ್ರಕರಣದಲ್ಲಿ ನಟಿಯರಾದ ಶ್ರದ್ಧಾ ಕಪೂರ್ ಮತ್ತು ನೋರಾ ಫತೇಹಿಗೆ ನೆಮ್ಮದಿ ಸಿಗುವ ಸಾಧ್ಯತೆ ಕಾಣಿಸಿದೆ. ಪ್ರಕರಣದ ತನಿಖೆಯಲ್ಲಿ ಇವರ ವಿರುದ್ಧನೇರ ಸಂಬಂಧ ತೋರಿಸುವ ಯಾವುದೇ ದೃಢ ಸಾಕ್ಷ್ಯಲಭ್ಯವಾಗದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಸಿದ್ಧಪಡಿಸುತ್ತಿರುವ ಪೂರಕ ದೋಷಾರೋಪ ಪಟ್ಟಿಯಲ್ಲಿ ಇವರ ಹೆಸರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣವು ಡ್ರಗ್ಸ್ ಪೂರೈಕೆ ಜಾಲದ ವಿರುದ್ಧ ನಡೆದ ಕಾರ್ಯಾಚರಣೆಯಿಂದ ಆರಂಭವಾಗಿತ್ತು. ಬಂಧಿತ ಆರೋಪಿಯೊಬ್ಬ ವಿಚಾರಣೆ ವೇಳೆ ಬಾಲಿವುಡ್‌ನ ಕೆಲವು ಗಣ್ಯರು ಭಾಗವಹಿಸುವ ಪಾರ್ಟಿಗಳಿಗೆ ಮಾದಕ ವಸ್ತು ಪೂರೈಕೆ ಮಾಡಿರುವುದಾಗಿ ಹೇಳಿಕೆ ನೀಡಿದ್ದರಿಂದ ತನಿಖೆಯ ದಿಕ್ಕು ಸೆಲೆಬ್ರಿಟಿಗಳತ್ತ ತಿರುಗಿತ್ತು. ಬಳಿಕ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
