ಉದಯವಾಹಿನಿ ಇಂಡಿ : ಇಂಡಿ ತಾಲೂಕಿನಲ್ಲಿ  ಮಾನ್ಯ ಶ್ರೀ ಸಿದ್ಧರಾಮಯ್ಯ  ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ  ವಿಧಾನ ಸೌಧ – ಬೆಂಗಳೂರು ( ಮಾನ್ಯ ತಹಶೀಲ್ದಾರ್ ಮುಖಾಂತರ ) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ SC/ST ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸುವ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. SC/ST ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ SC /ST ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಇಂಡಿ ತಾಲೂಕಾ ಅಧ್ಯಕ್ಷರಾದ ವಿನೋದ್ ಕಾಳೆ  ಈ ಮೂಲಕ ತಮ್ಮಲ್ಲಿ ಒತ್ತಾಯಿಸುತಾರೆ.
ಈ ಸಂದರ್ಭದಲ್ಲಿ. ಆಕಾಶ ಹಾದಿಮನಿ. ರವಿ ಶಿಂಗೆ. ಗಂಗಾಧರ್ ಕಾಳೆ.ರಾಹುಲ್ ಮನಗೂಳಿ. ಸಂತೋಷ್ ತಳಕೇರಿ. ಪ್ರವೀಣ್ ಕಾಂಬಳೆ.ವಿನಾಯಕ್ ಕಾಳೆ . ರಾಮ್ ಪೋತೆ. ಮರಿಯಪ್ಪ ಹರಿಜನ್. ಉಪಸ್ಥರಿದ್ದರು
1) ಮಾನ್ಯ ಶ್ರೀ ಎಚ್. ಸಿ ಮಹದೇವಪ್ಪ – ಸಚಿವರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು
2) ಮಾನ್ಯ ಶ್ರೀ ಬಿ. ನಾಗೇಂದ್ರ – ಸಚಿವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು

Leave a Reply

Your email address will not be published. Required fields are marked *

error: Content is protected !!