ಉದಯವಾಹಿನಿ, ಕೋಲ್ಕತ್ತಾ: ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಏ.27) ಬರ್ರಾಕ್‌ಪುರ್‌ದಲ್ಲಿ ಆಯೋಜಿಸಲಾದ ರ‍್ಯಾಲಿಯಲ್ಲಿ ಭಾಗವಹಿಸಿ, ಮಾತನಾಡಿದರು. ಹೆಲಿಪ್ಯಾಡ್‌ನಿಂದ ಇಲ್ಲಿಗೆ ಬರುವಾಗ ಸುಮಾರು ಎರಡು ಕಿ.ಮೀ ದೂರದಲ್ಲಿ ಎರಡೂ ಕಡೆ ಭಾರೀ ಜನಸಮೂಹವಿತ್ತು. ಬೆಳಗ್ಗೆ ಅಷ್ಟು ಮಂದಿ ನನ್ನನ್ನು ಆಶೀರ್ವದಿಸಲು ಬಂದಿರುವುದು ನನಗೆ ಉಹಿಸಲು ಸಾಧ್ಯವಾಗಿರಲಿಲ್ಲ. ಪಶ್ಚಿಮ ಬಂಗಾಳದಲ್ಲಿ ಇದು ನನ್ನ ಕೊನೆಯ ರ‍್ಯಾಲಿ. ಮೇ 4ರಂದು ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ನಾನು ಖಂಡಿತವಾಗಿ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (TMC) ಸರ್ಕಾರವನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಕೈಗಾರಿಕೆಗಳು ಕುಸಿದಿವೆ, ಅನೇಕ ಕಾರ್ಖಾನೆಗಳು ಮುಚ್ಚಿವೆ. ಟಿಎಂಸಿ ಸರ್ಕಾರಕ್ಕೆ ಭವಿಷ್ಯದ ಅಭಿವೃದ್ಧಿಗೆ ಸ್ಪಷ್ಟ ರೋಡ್‌ಮ್ಯಾಪ್ ಇಲ್ಲ. ಹೀಗಾಗಿ ಡಬಲ್ ಎಂಜಿನ್ ಸರ್ಕಾರದ ಅಗತ್ಯವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡಿದಾಗಲೇ ವೇಗವಾಗಿ ಅಭಿವೃದ್ಧಿ ಸಾಧ್ಯ. ಟಿಎಂಸಿಯ ಸಿಂಡಿಕೇಟ್ ವ್ಯವಸ್ಥೆಯನ್ನು ಕೊನೆಗೊಳಿಸಬೇಕು. ಟಿಎಮ್‌ಸಿ ಭಯೋತ್ಪಾದನೆ ಮತ್ತು ಅಪಶಬ್ದ ರಾಜಕಾರಣದ ಮೇಲೆಯೇ ಅವಲಂಬಿತವಾಗಿದೆ. ಮಹಿಳೆಯರಿಗೆ ರಾಜ್ಯವು ಅಸುರಕ್ಷಿತವಾಗಿದೆ. ಹೀಗಾಗಿ ಮಹಿಳಾ ಮತದಾರರು ಟಿಎಂಸಿ ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಯೋಚಿಸಿ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ.
