ಉದಯವಾಹಿನಿ ರಾಮನಗರ: ರೈತರ ಆತ್ಮಹತ್ಯೆ ಪ್ರಕರಣದ ಬಾಕಿ ಪರಿಹಾರ ವಿತರಣೆಯನ್ನು ಕೂಡಲೇ ಇತ್ಯರ್ಥಪಡಿಸಿ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ರಾಮನಗರ ಜಿಲ್ಲೆಯ ರೈತರ ಆತ್ಮಹತ್ಯೆ ಪ್ರಕರಣದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 2015-16ನೇ ಸಾಲಿನಿಂದ 2023-24ನೇ ಸಾಲಿನವರೆಗೆ ಒಟ್ಟು 92 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 72 ಪ್ರಕರಣಗಳಿಗೆ ಪರಿಹಾರ ವಿತರಿಸಲು ಶಿಫಾರಸ್ಸು ಮಾಡಲಾಗಿದೆ. 17 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಒಂದು ಪ್ರಕರಣದಲ್ಲಿ ಎಫ್‌ಎಸ್‌ಎಲ್ ವರದಿಗಾಗಿ ಪ್ರಕರಣವನ್ನು ಇತ್ಯರ್ಥಪಡಿಸಲಾಗಿರುವುದಿಲ್ಲ. 72 ಪ್ರಕರಣದಲ್ಲಿ 51 ಪ್ರಕರಣಗಳಿಗೆ ಮಾಸಾಶನ ಮಂಜೂರು ಮಾಡಲಾಗಿದೆ. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ 62 ಪ್ರಕರಣಗಳಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ. 12 ಪ್ರಕರಣಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಸವಲತ್ತುಗಳನ್ನು ನೀಡಲಾಗಿದೆ ಎಂದರು.
ರಾಮನಗರ ತಾಲ್ಲೂಕು: ರಾಮನಗರ ತಾಲ್ಲೂಕಿನಲ್ಲಿ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು, 21 ಪ್ರಕರಣಗಳಿಗೆ ಪರಿಹಾರ ವಿತರಣೆಗೆ ಶಿಫಾರಸ್ಸು ಮಾಡಲಾಗಿದೆ ಹಾಗೂ ಚೆಕ್ ವಿತರಣೆ ಮಾಡಲಾಗಿದೆ. ಇದರಲ್ಲಿ 17 ಜನರಿಗೆ ಮಾಸಾಶನ ನೀಡಲಾಗಿದೆ. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ 18 ಪ್ರಕರಣಗಳಿಗೆ ಆರೋಗ್ಯ ಕಾರ್ಡ್ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ 4 ಪ್ರಕರಣಗಳಿಗೆ ಸವಲತ್ತು ವಿತರಿಸಲಾಗಿದೆ.

ಚನ್ನಪಟ್ಟಣ ತಾಲ್ಲೂಕು: ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು, 4 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಒಂದು ಪ್ರಕರಣವನ್ನು ಕಾಯ್ದಿರಿಸಲಾಗಿದೆ. ಒಟ್ಟು 17 ಪ್ರಕರಣಗಳಿಗೆ ಪರಿಹಾರ ವಿತರಣೆಗೆ ಶಿಫಾರಸ್ಸು ಮಾಡಲಾಗಿದೆ ಹಾಗೂ ಚೆಕ್ ವಿತರಣೆ ಮಾಡಲಾಗಿದೆ. ಇದರಲ್ಲಿ 10 ಜನರಿಗೆ ಮಾಸಾಶನ ನೀಡಲಾಗಿದೆ. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ 16 ಪ್ರಕರಣಗಳಿಗೆ ಆರೋಗ್ಯ ಕಾರ್ಡ್ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ 2 ಪ್ರಕರಣಗಳಿಗೆ ಸವಲತ್ತು ವಿತರಿಸಲಾಗಿದೆ

ಕನಕಪುರ ತಾಲ್ಲೂಕು: ಕನಕಪುರ ತಾಲ್ಲೂಕಿನಲ್ಲಿ ಒಟ್ಟು 45 ಪ್ರಕರಣಗಳು ವರದಿಯಾಗಿದ್ದು, 11 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಒಟ್ಟು 33 ಪ್ರಕರಣಗಳಿಗೆ ಪರಿಹಾರ ವಿತರಣೆಗೆ ಶಿಫಾರಸ್ಸು ಮಾಡಲಾಗಿದೆ ಹಾಗೂ ಚೆಕ್ ವಿತರಣೆ ಮಾಡಲಾಗಿದೆ. ಇದರಲ್ಲಿ 23 ಜನರಿಗೆ ಮಾಸಾಶನ ನೀಡಲಾಗಿದೆ. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ 27 ಪ್ರಕರಣಗಳಿಗೆ ಆರೋಗ್ಯ ಕಾರ್ಡ್ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ 6 ಪ್ರಕರಣಗಳಿಗೆ ಸವಲತ್ತು ವಿತರಿಸಲಾಗಿದೆ

ಮಾಗಡಿ ತಾಲ್ಲೂಕು: ಮಾಗಡಿ ತಾಲ್ಲೂಕಿನಲ್ಲಿ ಒಟ್ಟು 03 ಪ್ರಕರಣಗಳು ವರದಿಯಾಗಿದ್ದು, 2 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. 01 ಪ್ರಕರಣಕ್ಕೆ ಪರಿಹಾರ ವಿತರಣೆಗೆ ಶಿಫಾರಸ್ಸು ಮಾಡಲಾಗಿದೆ ಹಾಗೂ ಚೆಕ್ ವಿತರಣೆ ಮಾಡಲಾಗಿದೆ. ಇದರಲ್ಲಿ 01 ಪ್ರಕರಣಕ್ಕೆ ಮಾಸಾಶನ ಹಾಗೂ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ 01 ಪ್ರಕರಣಕ್ಕೆ ಆರೋಗ್ಯ ಕಾರ್ಡ್ ನೀಡಲಾಗಿದೆ.

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಅವಲಂಭಿತರು ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ, ವೈದ್ಯಕೀಯ, ಇಂಜಿನಿಯರಿAಗ್ ಸೇರಿದಂತೆ ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿದ್ದಲ್ಲಿ ಅವರಿಗೂ ಸಹ ಶಾಲಾ-ಕಾಲೇಜು ಶುಲ್ಕವನ್ನು ಮರುಪಾವತಿ ಮಾಡಲು ಕ್ರಮವಹಿಸುವಂತೆ ತಿಳಿಸಿದರು.ಉಚಿತ ವಿದ್ಯಾಭ್ಯಾಸ, ವಸತಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯುತ್ತಿರುವವರ ಹಾಗೂ ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ದಾಖಲಾಗಿದ್ದಲ್ಲಿ ಅವರ ಕುರಿತು ಮಾಹಿತಿಯನ್ನು ಶಿಕ್ಷಣ ಇಲಾಖೆಯು ಕೃಷಿ ಇಲಾಖೆಗೆ ನೀಡುವಂತೆ ತಿಳಿಸಿದರು.ಸವಲತ್ತುಗಳನ್ನು ವಿತರಿಸಲು ಬಾಕಿಯಿರುವ ಪ್ರಕರಣಗಳ ಪಟ್ಟಿ ಮಾಡಿ ಒಂದು ವಾರದಲ್ಲಿ ಸೌಲಭ್ಯಗಳನ್ನು ವಿತರಣೆ ಮಾಡಿ ವರದಿ ನೀಡುವಂತೆ ಹಾಗೂ ಇದರ ಮೇಲ್ವಿಚಾರಣೆಯನ್ನು ಕೃಷಿ ಉಪನಿರ್ದೇಶಕರು ವಹಿಸುವಂತೆ ತಿಳಿಸಿದರು.ಒಟ್ಟು 72 ಪ್ರಕರಣಗಳಲ್ಲಿ ಶಿಕ್ಷಣ ಇಲಾಖೆಯಿಂದ 12 ಪ್ರಕರಣಗಳಿಗೆ ಸಂಬ0ಧಿಸಿದ0ತೆ ಸವಲತ್ತುಗಳು ಪಡೆಯಲಾಗಿದ್ದು, ಉಳಿದವರು ಸರ್ಕಾರಿ ಶಾಲೆ, ವಸತಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದಾಗಿ ತಿಳಿಸಿದರು. ಸಭೆಯಲ್ಲಿ ಕೃಷಿ ಉಪನಿರ್ದೇಶಕರಾದ ಉಮೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಾಂತರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗೋವಿಂದ ರಾಜು ಸಿ.ಕೆ., ಮಾಗಡಿ ತಾಲ್ಲೂಕಿನ ತಹಶೀಲ್ದಾರರಾದ ಮಹೇಂದ್ರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!