ಉದಯವಾಹಿನಿ, ಇಸ್ಲಾಮಾಬಾದ್, : ಪಾಕಿಸ್ತಾನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದ ಸುರಕ್ಷಿತ ತಾಣಗಳಲ್ಲಿ ಅಡಗಿರುವ ಉಗ್ರರ ಮೇಲೆ ನಡೆಯುತ್ತಿರುವ ದಾಳಿಗಳ ಸರಣಿ ಮತ್ತೊಂದು ತಿರುವು ಪಡೆದಿದೆ.
ಆರಂಭಿಕ ವರದಿಗಳ ಪ್ರಕಾರ, ಅಫ್ರಿದಿ ಮೇಲೆ ದಾಳಿಕೋರರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಅಮೆರಿಕದಿಂದ ನಿಷೇಧಕ್ಕೊಳಗಾಗಿರುವ ಲಷ್ಕರ್ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಅಫ್ರಿದಿ ಪ್ರಮುಖ ಕೊಂಡಿಯಾಗಿದ್ದ. ತನಿಖಾಧಿಕಾರಿಗಳ ಪ್ರಕಾರ, ಇದು ಪಕ್ಕಾ ಯೋಜಿತ ‘ಟಾರ್ಗೆಟೆಡ್ ಕಿಲ್ಲಿಂಗ್’ ಆಗಿದ್ದು, ದಾಳಿಕೋರರು ಅಫ್ರಿದಿಗೆ ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ನೀಡಿಲ್ಲ.
ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕರಿಗೆ ಕಾಲ ಕೂಡಿ ಬಂದಂತಿದೆ, ಕಳೆದ ತಿಂಗಳು ಲಾಹೋರ್‌ನಲ್ಲಿ ಲಷ್ಕರ್ ಸ್ಥಾಪಕ ಸದಸ್ಯ ಅಮೀರ್ ಹಮ್ಜಾನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್‌ನ ಹಿರಿಯ ಸಹೋದರ ತಾಹಿರ್ ಅನ್ವರ್ ಕೂಡ ನಿಗೂಢ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ.ರಿಯಾಸಿ ದಾಳಿಯ ಮಾಸ್ಟರ್‌ಮೈಂಡ್ ಕತಲ್ ಸಿಂಧಿಯನ್ನು ಕಳೆದ ವರ್ಷ ಝೇಲಂನಲ್ಲಿ ಹತ್ಯೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!