ಉದಯವಾಹಿನಿ, ಸಿಕ್ಕಾಪಟ್ಟೆ ಮಾಸ್ ಕಥಾಹಂದರ ಇರುವ ‘ಮಾರಿಗೆ ದಾರಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಮೇಕಿಂಗ್ ಮೂಲಕ ಈ ಟೀಸರ್ ಗಮನ ಸೆಳೆಯುತ್ತಿದೆ. ಒಂದೂವರೆ ನಿಮಿಷದ ಈ ಟೀಸರ್​​ನಲ್ಲಿ ಇಡೀ ಸಿನಿಮಾದ ಝಲಕ್ ಕಾಣಿಸಿದೆ. ಸಿನಿಮಾ ಹೇಗಿರಬಹುದು ಎಂಬುದರ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಅಗಸ್ತ್ಯ ಅವರು ಹೀರೋ ಆಗಿ ನಟಿಸಿದ್ದಾರೆ. ಅಲ್ಲದೇ ಚಿತ್ರದ ಹಲವು ವಿಭಾಗಗಳಲ್ಲಿ ಅವರು ಕೆಲಸ ಮಾಡಿದ್ದಾರೆ.
ಮಾರಿಗೆ ದಾರಿ’ ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಮೂಡಿದೆ. ಈ ಟೀಸರ್​ನಲ್ಲಿ ಆ್ಯಕ್ಷನ್ ಅಬ್ಬರ ಇದೆ. ಮಾಸ್ ಸಿನಿಮಾ ಬಯಸುವ ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾಯುವಂತಾಗಿದೆ. ಹಾಗಂತ ಕಥೆಯ ಬಗ್ಗೆ ಹೆಚ್ಚು ಸುಳಿವು ಬಿಟ್ಟು ಕೊಟ್ಟಿಲ್ಲ. ಆ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಲಾಗಿದೆ. ಟೀಸರ್ ನೋಡಿದವರು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿರುವುದು ‘ಮಾರಿಗೆ ದಾರಿ’ ಚಿತ್ರತಂಡಕ್ಕೆ ಸಂತಸ ತಂದಿದೆ. ಹೀರೋ ಅಗಸ್ತ್ಯ ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿರುವುದು ಮಾತ್ರವಲ್ಲದೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ‘ರಾಧ ಫಿಲ್ಮ್ಸ್’ ಬ್ಯಾನರ್ ಮೂಲಕ ರಾಧ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚೇತನ್‌ ಚಂದ್ರ ಮತ್ತು ಸತೀಶ್ ಕೃಷ್ಣ ಶೆಟ್ಟಿ ಸಹ-ನಿರ್ಮಾಪಕರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!