ಉದಯವಾಹಿನಿ, ಬೆಂಗಳೂರು: ಬೆಂಗಳೂರಿನ ಖಾಸಗಿ ಕಂಪನಿಯ ಕ್ಯಾಂಟೀನ್‌ನಲ್ಲಿ ಇಡ್ಲಿ, ವಡೆ ಮತ್ತು ಸಾಂಬಾರ್-ಅನ್ನ ತಿಂದ ನಂತರ 97 ಉದ್ಯೋಗಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಗಳ ಕುರಿತು ಚರ್ಚೆಗಳು ಆರಂಭವಾಗಿವೆ.
ಹೌದು.. ಇಡ್ಲಿ, ದೋಸೆ ಮತ್ತು ವಡೆಯಂತಹ ಹುದುಗಿಸಿದ ಆಹಾರ ಪದಾರ್ಥಗಳನ್ನು ಸಾಮಾನ್ಯವಾಗಿ ಕರುಳಿನ ಆರೋಗ್ಯಕ್ಕೆ ಉತ್ತಮ ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರವೆಂದು ಪರಿಗಣಿಸಲಾಗುತ್ತದೆ.
ಆದರೆ, ಬೇಸಿಗೆಯ ಹೆಚ್ಚಿನ ತಾಪಮಾನದಲ್ಲಿ ಆಹಾರ ಪದಾರ್ಥಗಳು ಬೇಗನೆ ಹಾಳಾಗುವ ಸಾಧ್ಯತೆ ಇರುತ್ತದೆ. ಬೇಸಿಗೆಯ ತಿಂಗಳುಗಳಲ್ಲಿ ಈ ಪದಾರ್ಥಗಳು ಬ್ಯಾಕ್ಟೀರಿಯಾದ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ.ಇದು ಆಹಾರ ವಿಷಾಹಾರವಾಗಲು ಕಾರಣವಾಗಬಹುದು ಎಂದು ಆಹಾರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
