ಉದಯವಾಹಿನಿ, ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು ಹಾಗೂ ಮಳೆ ಅವಾಂತ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ನಡೆಸಿದ್ದರು. ಈ ವೇಳೆ ಸಿಎಂ ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ, ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ.  ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ಸಂಬಂಧ ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸಿಎಂ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!