ಉದಯವಾಹಿನಿ, ಬೆಂಗಳೂರು: ಸಿಟಿಇ ಪರೀಕ್ಷೆ ವೇಳೆ ವಸ್ತ್ರಸಂಹಿತೆಯಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಜನಿವಾರ ಹಾಗೂ ಹಿಜಬ್‌ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಆದ್ದರಿಂದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮಾತ್ರ ಅನ್ವಯ ಆಗುವಂತೆ ಮರುಪರೀಕ್ಷೆ ನಡೆಸುತ್ತೇವೆ ಎಂದು ಸಚಿವರುತಿಳಿಸಿದ್ದಾರೆ.
ಗ್ರೇಸ್ ಅಂಕ ಸಮಂಜಸವಲ್ಲ: ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ಕೊಡೋದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ, ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡೋದು ಸೂಕ್ತ ಅಂತ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ ಸಚಿವರು. ಸಿಇಟಿ ಪರೀಕ್ಷೆ ವೇಳೆ ಜನಿವಾರಕ್ಕೆ ಕತ್ತರಿ ಪ್ರಕರಣ ಬಹಳಷ್ಟು ವಿವಾದ ಪಡೆದುಕೊಂಡ ಬೆನ್ನಲ್ಲೇ ಹಿಜಬ್ ಧರಿಸಿ ಸಿಇಟಿ ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗೆ ಸಿಇಟಿ ಪರೀಕ್ಷೆ
