ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವನ್ನು ಲೋಕಾಯುಕ್ತ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಏಳು ಮಂದಿಯ ಬಲಿತೆಗೆದುಕೊಂಡ ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.
ಇಂದು ಮಧ್ಯಾಹ್ನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಮತ್ತು ಉಪಲೋಕಾಯುಕ್ತರು ದುರಂತ ಸಂಭವಿಸಿದ ಬೌರಿಂಗ್ಆಸ್ಪತ್ರೆಯ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳ ವೀಕ್ಷಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಲೋಕಾಯುಕ್ತರು, ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
“ಇದು ಅಕ್ಷರಶಃ ನಿರ್ಲಕ್ಷ್ಯದ ಪರಮಾವಧಿ. ಸಾರ್ವಜನಿಕರು ಓಡಾಡುವ ಜಾಗದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಜಿಬಿಎ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ಪಷ್ಟ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದು ನ್ಯಾ. ಬಿ.ಎಸ್. ಪಾಟೀಲ್ ಸಿಟ್ಟು ಹೊರಹಾಕಿದರು.

Leave a Reply

Your email address will not be published. Required fields are marked *

error: Content is protected !!