ಉದಯವಾಹಿನಿ, ಬೆಂಗಳೂರು: ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಕಾಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಟಡಿದ ಅವರು, ಏಳು ಜನ ಮೃತಪಟ್ಟಿದ್ದು, ಅದರಲ್ಲಿ 4 ಜನ ಬೀದಿ ಬದಿ ವ್ಯಾಪಾರಿಗಳು, ಇಬ್ಬರು ಕೇರಳದವರು. ಒಂದು ಮಗು ಸಾವನ್ನಪ್ಪಿದ್ದು, ಒಬ್ಬರ ಗುರುತು ಇನ್ನೂ ಸಿಕ್ಕಿಲ್ಲ. ಚಪ್ಪಲಿ ವ್ಯಾಪಾರಿ, ಬಟ್ಟೆ ವ್ಯಾಪಾರಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಕೇರಳದಿಂದ ಬಂದವರು ಮೃತಪಟ್ಟಿದ್ದಾರೆ ಎಂದರು.
