ಉದಯವಾಹಿನಿ, ಬೆಂಗಳೂರು: ಸುಮನಹಳ್ಳಿ ಫ್ಲೈ ಓವರ್ ಮೇಲೆ‌ ಸರಣಿ ಅಪಘಾತ ಸಂಭವಿಸಿದೆ. ಕಾರು ಲಾರಿ ಸೇರಿದಂತೆ 7-8 ವಾಹನಗಳ ನಡುವೆ ಅಪಘಾತ ನಡೆದಿದೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಕ್ಕೆ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.ಮಳೆಯಿಂದ ಫ್ಲೈ ಓವರ್ ಮೇಲೆ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ವಾಹನಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ಸಂದರ್ಭದಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕಿದೆ.

Leave a Reply

Your email address will not be published. Required fields are marked *

error: Content is protected !!