ಉದಯವಾಹಿನಿ , ಬೆಂಗಳೂರು: ಚಿನ್ನ ಮತ್ತು ಬೆಳ್ಳಿಯ ದರ ಏರಿಕೆಯಾಗುತ್ತಿದ್ದಂತೆ ಕಳ್ಳರು ಮತ್ತೆ ತಮ್ಮ ಕೈಚಳಕ ತೋರಿಸಲು ಶುರುಮಾಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಭೀಕರ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕದೀಮರು ದೋಚಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾಕಳ್ಳತನದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ
ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಳಿಗೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಳ್ಳರು ಗೋಡೆ ಕೊರೆಯಲು ಬಳಸಿದ ವಿಧಾನಗಳನ್ನು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ನಗರದಲ್ಲಿ ಸರಣಿ ಕಳ್ಳತನಗಳು ನಡೆಯುತ್ತಿರುವುದು ವ್ಯಾಪಾರಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ರು 70 ಕೆಜಿ ಬೆಳ್ಳಿ ವಸ್ತುಗಳ್ಳನ್ನು ಕದ್ದಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!