
ಉದಯವಾಹಿನಿ ಯಡ್ರಾಮಿ: ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಜರುಗಿತು.
ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀಮತಿ ಶ್ರೀದೇವಿ ಹನುಮಂತ ದಂಡೋಲ್ಕರ್ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಶ್ರೀಮತಿ ಶೋಭಾ ನಾಗಣ್ಣ ಪಡಶೆಟ್ಟಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸನ್ಮಾನಿಸಿದರು.ಮಾತನಾಡಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಈ ಒಂದು ವಿಜಯ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ನಂಬಿಕೆ ಅದಕ್ಕಾಗಿ ಈ ಒಂದು ವಿಜಯೋತ್ಸವವನ್ನು ಪಕ್ಷದ ಕಾರ್ಯಕರ್ತರ ವಿಜಯೋತ್ಸವ ಎಂದು ಹೇಳಿದರು. ಈ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಜೆಡಿಎಸ್ ಪಕ್ಷದ ಪಾಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿಹನುಮಂತ್, ವೀರೇಶ ಪಾಟೀಲ ನರಿಬೋಳ, ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
