
ಉದಯವಾಹಿನಿ ಸುರಪುರ : ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಸರಕಾರದಿಂದ ಬರುತ್ತಿರುವ ಆಹಾರ ಧಾನ್ಯ, ಮೊಟ್ಟೆ ಹಾಗೂ ಗರ್ಭಿಣಿಯರಿಗೆ ಬರುತ್ತಿರುವ ಪೌಷ್ಟಿಕಾಂಶಗಳನ್ನು ಸರಿಯಾಗಿ ವಿತರಸದೆ ಕಾಳಸಂತೆಯಲ್ಲಿ ಮಾರುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ತಡೆ ಹಿಡಿಯಬೇಕು ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆಯ ಕೆಂಭಾವಿ ಘಟಕ ಅಧ್ಯಕ್ಷ ಪರಶುರಾಮ್ ಭೋನ್ಹಾಳ್ ಆಗ್ರಹಿಸಿದ್ದಾರೆ.ಈ ಕುರಿತು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ಪ್ರತಿ ತಿಂಗಳು ಅಂಗನವಾಡಿಯಲ್ಲಿ ಕಲಿಯುತ್ತಿರುವ ಬಡ ಮಕ್ಕಳಿಗೆ ಬಂದಂತಹ ಆಹಾರ ಧ್ಯಾನ, ಮೊಟ್ಟೆ ಸೇರಿದಂತೆ ಇನ್ನಿತರ ಪದಾರ್ಥಗಳು ಸರಿಯಾಗಿ ಮಕ್ಕಳಿಗೆ ವಿತರಣೆ ಆಗುತ್ತಿಲ್ಲ, ಒಂದು ತಿಂಗಳು ವಿತರಣೆ ಮಾಡಿದರೆ ಎರಡು ಮೂರು ತಿಂಗಳು ಆಹಾರ ಧಾನ್ಯ ಬಂದಿಲ್ಲ ಅಂತಾ ಹೇಳಿ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಅಧಿಕಾರಿಗಳು ಪ್ರತಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಸರಿಯಾದ ರೀತಿಯಲ್ಲಿ ಆಹಾರ ಧ್ಯಾನ ವಿತರಣೆ ಮಾಡುತ್ತಿದ್ದಾರೆಯೇ ಎಂದು ಪರಿಶೀಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಕಾರ್ಯಕರ್ತೆಯರ ವೇತನ ವನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
