ಉದಯವಾಹಿನಿ , ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಹಿಂದೆ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಈ ಸಿನಿಮಾ, ಕೊನೆಗೂ ಈ ವರ್ಷ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಐಪಿಎಲ್ ಪಂದ್ಯಗಳು ಮುಗಿದ ತಕ್ಷಣವೇ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಮೊದಲು ಜೂನ್ 4ರಂದು ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗುವುದಾಗಿ ತಿಳಿಸಿತ್ತು. ಆದರೆ ಪ್ಲ್ಯಾನ್ ಬದಲಾಯಿತು.
ಬುಚ್ಚಿ ಬಾಬು ಸನಾ ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಬಾಲಿವುಡ್ ನಟಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ವಿಶೇಷವೆಂದರೆ, ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು ಸ್ಯಾಂಡಲ್‌ವುಡ್ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಜಗಪತಿ ಬಾಬು ಮತ್ತು ದಿವ್ಯೇಂದು ಶರ್ಮಾ ಕೂಡ ಚಿತ್ರದ ತಾರಾಗಣದಲ್ಲಿದ್ದಾರೆ.
ಈಗಾಗಲೇ ಈ ಚಿತ್ರದ ‘ಚಿಕಿರಿ ಚಿಕಿರಿ’ ಹಾಡು ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಎ.ಆರ್. ರೆಹಮಾನ್ ಸಂಗೀತ ನೀಡಿರುವ ಈ ಹಾಡು ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸುಮಾರು 200 ಮಿಲಿಯನ್‌ಗಿಂತಲೂ ಅಧಿಕ ವೀಕ್ಷಣೆಗಳನ್ನು ಪಡೆದಿದೆ. ಇತ್ತೀಚೆಗೆ ಬಿಡುಗಡೆಯಾದ ಪೆದ್ದಿ ಪೆಹಲ್ವಾನ್ ಲುಕ್‌ನಲ್ಲಿ ರಾಮ್ ಚರಣ್ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
