ಉದಯವಾಹಿನಿ, ಕೋಲಾರ: ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮಾರುತಿ ನಗರದಲ್ಲಿ ನಡೆದಿದೆ. ರಾಜೇಶ್ (40) ಮೃತ ವ್ಯಕ್ತಿ. ರಾಜೇಶ್ ಛಾಯಾಗ್ರಾಹಕರಾಗಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರಾಜೇಶ್ ಕುಡಿದ ಅಮಲಿನಲ್ಲಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮನೆಯಿಂದ ಹೊಗೆ ಬರುವುದನ್ನು ಗಮನಿಸಿದ ಅಕ್ಕಪಕ್ಕದವರು ಮನೆಯೊಳಗೆ ಪರಿಶೀಲನೆ ನಡೆಸಿದಾಗ ರಾಜೇಶ್ ದೇಹ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
