ಉದಯವಾಹಿನಿ, ಪಾಕಿಸ್ತಾನದಲ್ಲಿ ಉಗ್ರ ಸಂಘಟನೆಗಳ ನಾಯಕರ ಮೇಲೆ ಸರಣಿ ದಾಳಿ ಮುಂದುವರಿದಿದ್ದು, ಮತ್ತೊಬ್ಬ ಪ್ರಮುಖ ಕಮಾಂಡರ್ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಹಿಬ್ಬುಲ್ ಮುಜಾಹಿದ್ದೀನ್ ಸಂಘಟನೆಯ ಪ್ರಮುಖ ಸದಸ್ಯ ಸಜ್ಜದ್ ಅಹ್ಮದ್ ಮೃತದೇಹ ಪತ್ತೆಯಾಗಿದೆ.
ಮೂಲಗಳ ಪ್ರಕಾರ, ಸಜ್ಜದ್ ಅಹ್ಮದ್ ತಮ್ಮ ನಿವಾಸದಲ್ಲೇ ಸಾವನ್ನಪ್ಪಿದ್ದು, ಇದು ಸಹಜ ಸಾವು ಅಲ್ಲ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!