ಉದಯವಾಹಿನಿ,  ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಎಂದು ಬರೆದುಕೊಂಡಿದ್ದರು. 2025ರ ಫೆ.16ರಂದು ಡಾಲಿ ಧನಂಜಯ್‌ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.

Leave a Reply

Your email address will not be published. Required fields are marked *

error: Content is protected !!