ಉದಯವಾಹಿನಿ, ಕೋಲಾರ: ಜಿಲ್ಲೆಯ ಹೊರ ವಲಯದ ಪ್ರಸಿದ್ಧ ಅಂತರಗಂಗೆ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ನಡೆದಿದ್ದು, ಅಪಾರ ಪ್ರಮಾಣದ ಕಾಡು ನಾಶವಾಗಿದೆ. ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಆದರೆ ಪ್ರವಾಸಿಗರು ನಡೆದುಕೊಂಡು ಹೋಗುವ ಮಾರ್ಗಮಧ್ಯೆ ಕಿಡಿಗೇಡಿಗಳು ಬೆಟ್ಟದ ಕೆಲವು ಪ್ರದೇಶಗಳಲ್ಲಿ ಬೆಂಕಿ ಹಾಕಿದ್ದಾರೆ. ಇದರಿಂದ ಸುಮಾರು ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಅಲ್ಲದೆ ಅಲ್ಲಿದ್ದ ಸಣ್ಣ-ಪುಟ್ಟ ಪ್ರಾಣಿ ಪಕ್ಷಿಗಳು ಸಹ ಬೆಂಕಿಯಲ್ಲಿ ಬೆಂದು ಹೋಗಿವೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಂತರಗAಗೆ ಬೆಟ್ಟದಲ್ಲಿ ವಾಸಿಸುವ ಪ್ರಾಣಿ ಸಂಕುಲಕ್ಕೆ ಇದರಿಂದ ಆತಂಕ ಶುರುವಾಗಿದ್ದು, ಪದೆ ಪದೆ ಹೀಗೆ ಬೆಂಕಿ ಹಾಕುತ್ತಿರುವ ಕಾರಣ ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗುತ್ತಿದೆ.
