ಉದಯವಾಹಿನಿ, ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ ಆರಾಮವಾಗಿ ಗೆಲ್ಲುತ್ತೇವೆ ಎಂದು ಗೊತ್ತಿತ್ತು. ಎಸ್‌ಡಿಪಿಐನಿಂದ ಅಪಾಯವಾಗಿದೆ. ಎಸ್‌ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು ಎಂದರು.
ಪಂಚ ರಾಜ್ಯಗಳ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ. ಇದೇ ವೇಳೆ ಕೇರಳದಲ್ಲಿ ಯುಡಿಎಫ್ ಮೈತ್ರಿಯ ಗೆಲುವಿನ ಬಗ್ಗೆ ಮಾತನಾಡಿ, ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್‌ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು ಎಂದು ಹೇಳಿದರು.

 

Leave a Reply

Your email address will not be published. Required fields are marked *

error: Content is protected !!