ಉದಯವಾಹಿನಿ, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯ ಪ್ರತಿಫಲವೇ ಎನ್‌ಡಿಎ ಇಂದು ಭರ್ಜರಿ ಗೆಲುವು ಸಾಧಿಸಿದೆ ಎಂದಿದ್ದಾರೆ.
ಈ ನಿರ್ಣಾಯಕ ಜನಾದೇಶವು ಜನರ ಆಕಾಂಕ್ಷೆಗಳು ಮತ್ತು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್‌ನ ಮಾರ್ಗದರ್ಶಿ ತತ್ವಗಳ ನಡುವಿನ ಆಳವಾದ ಹೊಂದಾಣಿಕೆಯನ್ನು ಎತ್ತಿ ತೋರಿಸುತ್ತದೆ. ಇದು ಎನ್‌ಡಿಎಯನ್ನು ವಿಶ್ವಾಸಾರ್ಹತೆ, ಕಾರ್ಯಕ್ಷಮತೆಯ ವೇದಿಕೆಯಾಗಿ ಬಲಪಡಿಸುತ್ತದೆ. ಈ ಮೂಲಕ ಯಂಗ್ ಇಂಡಿಯಾ, ಸಮಗ್ರತೆ ಮತ್ತು ನಾಗರಿಕರೊಂದಿಗೆ ನಿಜವಾದ ಸಂಪರ್ಕವನ್ನು ಗೌರವಿಸುತ್ತದೆ ಎಂಬುದನ್ನು ತಿಳಿಸಿದೆ.
