ಉದಯವಾಹಿನಿ,
ಬಾರಾಮುಲ್ಲ: ನಾಕಾ ತಪಾಸಣೆಯ ವೇಳೆ ಆಜಾದ್ಗಂಜ್ ಬಾರಾಮುಲ್ಲಾದಲ್ಲಿ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿ ದ್ದಾರೆ. ಯುಎ (ಪಿ) ಆಕ್ಟ್ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿತ ಉಗ್ರರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಧಿತ ಉಗ್ರರು ಲಷ್ಕರ್ ಎ ತೊಯ್ಬಾದೊಂದಿಗೆ ಸಂಬಂಧ ಸಂಪರ್ಕದಲ್ಲಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉಗ್ರರ ಬಳಿ ಒಂದು ಪಿಸ್ತೂಲ್ ಮ್ಯಾಗಜೀನ್, ನಾಲ್ಕು ಗುಂಡುಗಳು ಮತ್ತು ಒಂದು ಗ್ರೆನೇಡ್ ಪತ್ತೆಯಾಗಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಭಯೋತ್ಪಾಧಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಬಾರಾಮುಲ್ಲಾ ಪೊಲೀಸ್, ೫೩ ಬಿಎನ್ ಸಿಆರ್‌ಪಿಎಫ್ ಮತ್ತು ಆರ್ಮಿ ೪೬ ಆರ್‌ಆರ್‌ನ ಜಂಟಿ ಪಡೆಗಳು ಅಜಾದ್‌ಗುಂಜ್ ಓಲ್ಡ್ ಟೌನ್‌ನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದವು.
