ಉದಯವಾಹಿನಿ, ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ ಕಳುಹಿಸಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ಡಿಎಂಕೆ ವಿಫಲವಾದ ಹಿನ್ನೆಲೆ ಸ್ಟಾಲಿನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ಇತ್ತ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಟಿವಿಕೆ ನಾಯಕ ದಳಪತಿ ವಿಜಯ್ 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ.
ಸ್ಟಾಲಿನ್ ಎಕ್ಸ್ ನಲ್ಲಿ ಏನಿದೆ?
ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ ತಮಿಳುನಾಡಿನ ಎಲ್ಲಾ ಜನರಿಗೆ ನಾನು ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮೆಲ್ಲರ ಪ್ರತಿಯೊಂದು ಮತವನ್ನು ನಾನು ಅಮೂಲ್ಯವಾದ ನಂಬಿಕೆ ಎಂದು ಪರಿಗಣಿಸುತ್ತೇನೆ. ಇಲ್ಲಿಯವರೆಗೆ ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಡಿಎಂಕೆ ಮೈತ್ರಿಕೂಟವು 1 ಕೋಟಿ 54 ಲಕ್ಷ 82 ಸಾವಿರ 782 ಮತಗಳನ್ನು ಪಡೆದಿದೆ. ಈ ಎಲ್ಲ ಜನರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ.
